ADVERTISEMENT

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ಜನರ ಪರದಾಟ

​ಪ್ರಜಾವಾಣಿ ವಾರ್ತೆ
Published 19 ಮೇ 2024, 15:33 IST
Last Updated 19 ಮೇ 2024, 15:33 IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಳೆ ನೀರನ್ನು ಚರಂಡಿಗಳಿಗೆ ಸರಾಗವಾಗಿ ಹರಿಯುವಂತೆ ಮಾಡುತ್ತಿದ್ದ ಯುವಕ. -ಪ್ರಜಾವಾಣಿ ಚಿತ್ರ/ಕಿಶೋರ್ ಕುಮಾರ್ ಬೋಳಾರ್
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಳೆ ನೀರನ್ನು ಚರಂಡಿಗಳಿಗೆ ಸರಾಗವಾಗಿ ಹರಿಯುವಂತೆ ಮಾಡುತ್ತಿದ್ದ ಯುವಕ. -ಪ್ರಜಾವಾಣಿ ಚಿತ್ರ/ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು: ನಗರದ ಹಲವೆಡೆ ಒಂದು ವಾರದಿಂದ ಸಂಜೆ, ರಾತ್ರಿ ವೇಳೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಾಗದೆ ಉಷ್ಣಾಂಶ ಏರಿಕೆಯಾಗಿ ಜನರು ಬಸವಳಿಯುವ ಸ್ಥಿತಿ ನಿರ್ಮಾಣವಾಗಿತ್ತು. ಕುಡಿಯುವ ನೀರಿಗೆ ಗಂಭೀರ ಸಮಸ್ಯೆ ಎದುರಾಗಿತ್ತು. ದುಬಾರಿ ಹಣ ನೀಡಿ ಜನರು ಟ್ಯಾಂಕರ್‌ನ ನೀರು ಖರೀದಿಸುತ್ತಿದ್ದರು.

ವಾರದಿಂದ ಸುರಿಯುತ್ತಿರುವ ಮಳೆ ವಾತಾವರಣ ತಂಪಾಗಿಸುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವಂತಾಗಿದೆ.

ಶನಿವಾರ ತಡರಾತ್ರಿ ಹಾಗೂ ಭಾನುವಾರ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ. ಹೆಸರಘಟ್ಟದಲ್ಲಿ 9 ಸೆಂ.ಮೀ ಹಾಗೂ ಯಲಹಂಕದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಯಲಹಂಕದ ನಾರ್ತ್‌ಹುಡ್‌ ಅಪಾರ್ಟ್‌ಮೆಂಟ್‌ ಒಳಗೆ ನೀರು ನುಗ್ಗಿತ್ತು. ರಸ್ತೆಗಳು ಜಲಾವೃತಗೊಂಡು ಜನರು ಪರದಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.