ADVERTISEMENT

ಕೆಲವೆಡೆ ತುಂತುರು, ಹಲವೆಡೆ ಜೋರು ಮಳೆ: ವಾಹನ ಸವಾರರ ಪರದಾಟ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 21:54 IST
Last Updated 1 ಸೆಪ್ಟೆಂಬರ್ 2021, 21:54 IST
ಮೈಸೂರು ರಸ್ತೆಯಲ್ಲಿ ಬುಧವಾರ ಮಹಿಳೆಯೊಬ್ಬರು ಸುರಿವ ಮಳೆಯಲ್ಲಿ ಕೊಡೆ ಹಿಡಿದು ಸಾಗಿದರು  ಪ್ರಜಾವಾಣಿ ಚಿತ್ರ. ಅನೂಪ್ ರಾಘ ಟಿ.
ಮೈಸೂರು ರಸ್ತೆಯಲ್ಲಿ ಬುಧವಾರ ಮಹಿಳೆಯೊಬ್ಬರು ಸುರಿವ ಮಳೆಯಲ್ಲಿ ಕೊಡೆ ಹಿಡಿದು ಸಾಗಿದರು  ಪ್ರಜಾವಾಣಿ ಚಿತ್ರ. ಅನೂಪ್ ರಾಘ ಟಿ.   

ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆಯಿಂದ ರಾತ್ರಿಯ ವರೆಗೂ ಮಳೆ ಆಗಿದ್ದು, ಹಲವೆಡೆ ಕಾಲುವೆಗಳು ತುಂಬಿ ರಸ್ತೆ ಮೇಲೆ ಧಾರಾಕಾರವಾಗಿ ನೀರು ಹರಿಯಿತು. ಮಧ್ಯಾಹ್ನ ಕೆಲವೆಡೆ ತುಂತುರು ಮಳೆಯಾಯಿತು. ಸಂಜೆ ನಂತರ ಹಲವೆಡೆ ಜೋರು ಮಳೆ ಸುರಿಯಿತು.

ಯಶವಂತಪುರ, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಮಲ್ಲೇಶ್ವರ, ಆರ್‌.ಟಿ.ನಗರ, ಪೀಣ್ಯ, ಹೆಬ್ಬಾಳ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಎಚ್‌ಎಎಲ್‌ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆಯಾಗಿದೆ.

ಮೆಜೆಸ್ಟಿಕ್, ಶಿವಾನಂದ ವೃತ್ತದ ಕೆಳಸೇತುವೆಯಲ್ಲಿ ಮಳೆ ನೀರು ಹರಿಯಿತು. ಅಂಥ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾ ಯಿಸಿಕೊಂಡು ಹೋದರು. ಕೆಲ ವಾಹನಗಳು ಕೆಟ್ಟು ನಿಂತಿದ್ದರಿಂದ, ದಟ್ಟಣೆಯೂ ಉಂಟಾಯಿತು. ‘ನಗರದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಹಾನಿ ಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿ ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.