ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ವೈ.ಎನ್.ಹೊಸಕೋಟೆ (ತುಮಕೂರು ಜಿಲ್ಲೆ) 15 ಸೆಂ.ಮೀ, ನರಗುಂದ (ಗದಗ ಜಿಲ್ಲೆ) 9 ಸೆಂ.ಮೀ, ದಾವಣಗೆರೆ ಮತ್ತು ಧಾರವಾಡದಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.