ADVERTISEMENT

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 7ರಿಂದ ಐದು ದಿನ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 4 ಮೇ 2024, 15:26 IST
Last Updated 4 ಮೇ 2024, 15:26 IST
<div class="paragraphs"><p>ಮಳೆ</p></div>

ಮಳೆ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ 7ರಿಂದ ಐದು ದಿನಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಭಾನುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ. ಕೆಲವೆಡೆ ಮಳೆಯ ಜತೆಗೆ ಬಿಸಿ ಗಾಳಿಯೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಸೋಮವಾರವೂ ಹಲವೆಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಮಂಗಳವಾರದಂದು ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಳಿಕ ರಾಜ್ಯದಾದ್ಯಂತ ವಿಸ್ತರಿಸಲಿದ್ದು, ಮಳೆಯ ತೀವ್ರತೆಯೂ ಹೆಚ್ಚಾಗುವ ಸಂಭವವಿದೆ. ಬುಧವಾರದಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಕೊಡಗು ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿದೆ. 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 45.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.