ADVERTISEMENT

ಬೆಂಗಳೂರು ಸುತ್ತಮುತ್ತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 20:15 IST
Last Updated 18 ಆಗಸ್ಟ್ 2019, 20:15 IST
   

ಬೆಂಗಳೂರು: ‘ಕೋಲಾರ, ಚಿಕ್ಕಬಳ್ಳಾಪುರ,ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರಜಿಲ್ಲೆಗಳಲ್ಲಿಆಗಸ್ಟ್‌ 19ಮತ್ತು 20ರಂದು ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದು ಹವಾಮಾನ ಇ‌ಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಉಳಿದಂತೆರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮಾನ್ಸೂನ್ ಮಾರುತಗಳ ಪ್ರಮಾಣ ಕ್ಷೀಣಿಸಿದ್ದು, ಮಳೆ ಪ್ರಮಾಣ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆ. 20ರ ವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ’ ಎಂದು ಮಾಹಿತಿ ನೀಡಿದರು.

ಭಾನುವಾರ ಧರ್ಮಸ್ಥಳ, ಕೊಪ್ಪಳ, ಶ್ರೀರಂಗಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ನಗರ 2, ಸುಬ್ರಹ್ಮಣ್ಯ, ಕಾರವಾರ, ಮೂಡಿಗೆರೆ, ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ 1 ಸೆಂ.ಮೀ ಮಳೆ ಬಿದ್ದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.