ADVERTISEMENT

ಬಿಬಿಎಂಪಿ | ಮಳೆ ನೀರು ಸಂಗ್ರಹ ಕಡ್ಡಾಯ : ತುಷಾರ್‌ ಗಿರಿನಾಥ್‌

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 19:46 IST
Last Updated 19 ಜುಲೈ 2024, 19:46 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ಬಿಬಿಎಂಪಿ ನಿರ್ಮಿಸಿರುವ ಹಾಗೂ ನಿರ್ಮಾಣ ಮಾಡಲಿರುವ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿಯಿಂದ ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಹಲವಾರು ಹೊಸ ಕಟ್ಟಡಗಳ ನಿರ್ಮಾಣದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೊಸ ಕಟ್ಟಡದ ಜೊತೆಗೆ ಹಾಲಿ ಕಟ್ಟಡಗಳ ನವೀಕರಣ ಹಾಗೂ ದುರಸ್ತಿ ಕಾಮಗಾರಿಗಳನ್ನು ಸಹ ನಿರ್ವಹಿಸಲಾಗುತ್ತಿದೆ. ಈ ಕಟ್ಟಡಗಳೂ ಸೇರಿದಂತೆ ಆಟದ ಮೈದಾನಗಳು/ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಮಳೆ ನೀರು ಸಂಗ್ರಹ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.

ಕಟ್ಟಡಗಳ ಚಾವಣಿ ಸೇರಿದಂತೆ ಆವರಣಗಳಿಂದ ಮಳೆ ನೀರನ್ನು ಸಂಗ್ರ
ಹಿಸಿ ಶೌಚಾಲಯ ಹಾಗೂ ಇತರೆ ಉದ್ದೇಶಗಳಿಗೆ ಮರು ಬಳಕೆ ಮಾಡಬೇಕು. ಮಳೆ ನೀರು ಸಂಗ್ರಹಣೆ ಸಾಧ್ಯವಿಲ್ಲದ ಸಂದರ್ಭದಲ್ಲಿ ಕಟ್ಟಡಗಳ ಆವರಣದಲ್ಲಿ ಮಳೆ ನೀರು ಇಂಗಿಸುವ ವ್ಯವಸ್ಥೆಯನ್ನು
ಅಳವಡಿಸಿಕೊಂಡು ಮಳೆ ನೀರು ಪೋಲಾಗದಂತೆ ತಡೆಯಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಅಧಿಕಾರಿಗಳಿಗೂ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.