ADVERTISEMENT

ಭಾರಿ ಮಳೆ: ರಾಜ್ಯದ 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 16:20 IST
Last Updated 6 ಸೆಪ್ಟೆಂಬರ್ 2024, 16:20 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹನ್ನೊಂದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ನಿರಂತರ ಬೀಸುವ ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಭಾನುವಾರವೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗ ಮತ್ತು ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದೆ. ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. 

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.