ADVERTISEMENT

ಬೆಂಗಳೂರಿನಲ್ಲಿ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 12:19 IST
Last Updated 23 ಮಾರ್ಚ್ 2020, 12:19 IST
   

ಬೆಂಗಳೂರು: ನಗರದಲ್ಲಿ ಭಾನುವಾರ ಸಂಜೆ ಜೋರು ಮಳೆ ಶುರುವಾಗಿದೆ.

ಗಾಂಧಿನಗರ, ಎಂ.ಜಿ.ರಸ್ತೆ, ಶಿವಾಜಿನಗರ, ಸಂಪಂಗಿ ರಾಮನಗರ, ಶಾಂತಿನಗರ, ಇಂದಿರಾನಗರ, ಹಲಸೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆಗುತ್ತಿದೆ.

ಜೋರು ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆ ಬರುತ್ತಿದ್ದು, ಜನರೆಲ್ಲ ರಸ್ತೆ ಅಕ್ಕ–ಪಕ್ಕದ ಅಂಗಡಿಗಳಲ್ಲಿ ಆಶ್ರಯ ಪಡೆದಿದ್ದಾರೆ.

ADVERTISEMENT

ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಜೋರಾದ ಮಳೆ ಆಗುತ್ತಿದೆ.

ಬೆಳಿಗ್ಗೆಯಿಂದಲೇನಗರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಸಂಜೆ ವೇಳೆಗೆ ಮೋಡ ಮುಸುಕಿದ ವಾತಾವರಣದೊಂದಿಗೆ ಜೋರು ಗಾಳಿ ಬೀಸಿ ಮಳೆ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.