ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಗೋಕಲ್ ದಾಸ್ ಎಕ್ಸ್‌ಪೋರ್ಟ್ಸ್ ಫೌಂಡೇಷನ್ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್‌ಆರ್) ಚಿಕ್ಕ ಬಿದಿರುಕಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಲ್ಲಸಂದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಷನ್‌ನ ಸಿಎಸ್‌ಆರ್ ಉಪಾಧ್ಯಕ್ಷ ಪ್ರಾಂಜಲ್, ‘ಮಳೆ ನೀರು ಸಂಗ್ರಹ ವ್ಯವಸ್ಥೆಯಿಂದ ಸಂಗ್ರಹವಾದ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ’ ಎಂದು ಹೇಳಿದರು.
ಫೌಂಡೇಷನ್‌ನ ರಾಜೇಂದ್ರ ಪ್ರಸಾದ್, ‘ಮಳೆ ನೀರು ಸಂಗ್ರಹ ವ್ಯವಸ್ಥೆ ಕೇವಲ ನೀರಿನ ಸಂಗ್ರಹಣೆಗೆ ಸಂಬಂಧಿಸಿದ್ದಲ್ಲ, ಅಂತರ್ಜಲವನ್ನು ಮರುಪೂರಣ ಮಾಡಲು ಸಹಕಾರಿಯಾಗಿದೆ. ನೀರಿಗೆ ಸಂಬಂಧಿಸಿದಂತೆ ಬಾಹ್ಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ’ ಎಂದರು. ಶಾಲೆಯ ಮುಖ್ಯೋಪಾಧ್ಯಾಯ ರಾಮಲಿಂಗೇಗೌಡ ಅವರು ಈ ವ್ಯವಸ್ಥೆ ಅಳವಡಿಕೆ ಸಂಬಂಧಿಸಿದಂತೆ ಫೌಂಡೇಷನ್‌ಗೆ ಕೃತಜ್ಞತೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.