ADVERTISEMENT

​ಪ್ರಜಾವಾಣಿ ವರದಿ ಪರಿಣಾಮ: ರಾಜಾಜಿನಗರದ ಆಟದ ಮೈದಾನದಲ್ಲಿದ್ದ ಕಸ ತೆರವು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2025, 21:29 IST
Last Updated 24 ಫೆಬ್ರುವರಿ 2025, 21:29 IST
<div class="paragraphs"><p>ರಾಜಾಜಿನಗರದ ರಾಮ ಮಂದಿರ ಆಟದ ಮೈದಾನವನ್ನು ಬಿಬಿಎಂಪಿ ಸಿಬ್ಬಂದಿ ಸೋಮವಾರ ಸ್ವಚ್ಛಗೊಳಿಸಿದರು</p></div>

ರಾಜಾಜಿನಗರದ ರಾಮ ಮಂದಿರ ಆಟದ ಮೈದಾನವನ್ನು ಬಿಬಿಎಂಪಿ ಸಿಬ್ಬಂದಿ ಸೋಮವಾರ ಸ್ವಚ್ಛಗೊಳಿಸಿದರು

   

ಬೆಂಗಳೂರು: ರಾಜಾಜಿನಗರದ ರಾಮ ಮಂದಿರ ಆಟದ ಮೈದಾನದಲ್ಲಿನ ಕಸದ ರಾಶಿ ಯನ್ನು ಬಿಬಿಎಂಪಿ ಸಿಬ್ಬಂದಿ ಸೋಮವಾರ ತೆರವುಗೊಳಿಸಿದ್ದಾರೆ.

‘ಪ್ರಜಾವಾಣಿ’ಯ ಫೆಬ್ರುವರಿ 24ರ ಸಂಚಿಕೆಯ ಕುಂದು ಕೊರತೆ ವಿಭಾಗದಲ್ಲಿ ‘ಆಟದ ಮೈದಾನದಲ್ಲಿ ಕಸದ ರಾಶಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಸಾರ್ವಜನಿಕರ ಅಹವಾಲು ಪ್ರಕಟವಾಗಿತ್ತು. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್‌ ಕುಮಾರ್‌ ಅವರು ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನು ಗಮನಿಸಿದ್ದು, ಆಟದ ಮೈದಾನ ಸ್ವಚ್ಛಗೊಳಿಸುವಂತೆ ಸಂಬಂಧಪಟ್ಟ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ADVERTISEMENT

‘ಆಟದ ಮೈದಾನದಲ್ಲಿದ್ದ ಕಸದ ರಾಶಿಯನ್ನು ತೆರವುಗೊಳಿಸುವಂತೆ
ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಬಿಬಿಎಂಪಿ ಸಿಬ್ಬಂದಿ ಆಟದ ಮೈದಾನವನ್ನು ಸ್ವಚ್ಛಗೊಳಿಸಿದ್ದಾರೆ’ ಎಂದು ಸುರೇಶ್‌ ಕುಮಾರ್‌ ಎಸ್. ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.