ADVERTISEMENT

ರಾಜಾಜಿನಗರದಲ್ಲಿ ‘ಸಂಚಾರ ಸಂಪರ್ಕ ದಿನ’ ಇಂದು

​ಪ್ರಜಾವಾಣಿ ವಾರ್ತೆ
Published 10 ಮೇ 2024, 16:23 IST
Last Updated 10 ಮೇ 2024, 16:23 IST
   

ಬೆಂಗಳೂರು: ಸಂಚಾರ ಪೊಲೀಸರಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ದೂರು ಆಲಿಸಲು ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ ಜಲಾರಾಮ್ ಭವನದಲ್ಲಿ ಮೇ 11ರಂದು ‘ಸಂಚಾರ ಸಂಪರ್ಕ ದಿನ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ಜಂಟಿ ಕಮಿಷನರ್ (ಸಂಚಾರ) ಎಂ.ಎನ್. ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ (ಸಂಚಾರ) ಅನಿತಾ ಹದ್ದಣ್ಣನವರ ಭಾಗವಹಿಸಲಿದ್ದಾರೆ.

‘ಸಂಚಾರ ದಟ್ಟಣೆ, ಸಂಚಾರ ನಿಯಮ ಉಲ್ಲಂಘನೆ, ಪೊಲೀಸರಿಂದ ತೊಂದರೆ, ಸಂಚಾರ ವ್ಯವಸ್ಥೆ ಸುಧಾರಣೆಗೆ ಸಲಹೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಜನರಿಂದ ಅಹವಾಲು ಸ್ವೀಕರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೆ.ಜಿ.ಹಳ್ಳಿ ಸಂಚಾರ ಠಾಣೆ, ಬನಶಂಕರಿ ಸಂಚಾರ ಠಾಣೆ ಹಾಗೂ ಜಾಲಹಳ್ಳಿ ಸಂಚಾರ ಠಾಣೆಯಲ್ಲಿಯೂ ಡಿಸಿಪಿ ನೇತೃತ್ವದಲ್ಲಿ ಸಂಚಾರ ಸಂಪರ್ಕ ದಿನ ಕಾರ್ಯಕ್ರಮ ನಡೆಯಲಿದೆ. ಆಯಾ ಠಾಣೆ ವ್ಯಾಪ್ತಿಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೂರು ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.