ADVERTISEMENT

ವಿದ್ಯಾರ್ಥಿಯ ಥಳಿಸಿದ ಶಿಕ್ಷಕ; ಹರಿದಾಡಿದ ವಿಡಿಯೊ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 4:44 IST
Last Updated 19 ಅಕ್ಟೋಬರ್ 2019, 4:44 IST
ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಥಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿರುವುದು
ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಥಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿರುವುದು   

ಬೆಂಗಳೂರು: ನಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರಿದಾಡಿತು.

ರಾಜಾಜಿನಗರದಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ ಎನ್ನಲಾದ ಘಟನೆಯನ್ನು ವಿದ್ಯಾರ್ಥಿಗಳೇ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅದನ್ನು ಹಲವರು ಶೇರ್ ಮಾಡಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿಡಿಯೊ ಗಮನಿಸಿದ್ದ ರಾಜಾಜಿನಗರ ಪೊಲೀಸರು, ತಮ್ಮ ವ್ಯಾಪ್ತಿಯ ಶಾಲೆ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

‘ಘಟನೆ ಬಗ್ಗೆ ಇದುವರೆಗೂ ಯಾವುದೇ ದೂರು ನೀಡಿಲ್ಲ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.