
ಯಲಹಂಕ: ರಾಜಾನುಕುಂಟೆಯಲ್ಲಿರುವ ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಾರೋಗ್ಯಕ್ಕೆ ತುತ್ತಾದ 35 ಹಾಲು ಉತ್ಪಾದಕ ರೈತರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲಾಯಿತು.
ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಆರೋಗ್ಯ ವೆಚ್ಚದ ₹25 ಸಾವಿರ ಚೆಕ್‌ಗಳನ್ನು ಒಕ್ಕೂಟದ ನಿರ್ದೇಶಕ ಸತೀಶ್ ಕಡತನಮಲೆ ಅವರು ವಿತರಿಸಿದರು.
ಬಳಿಕ ಮಾತನಾಡಿದ ಅವರು, ‘ಹಾಲು ಉತ್ಪಾದಕ ರೈತರು ತಮ್ಮ ಮತ್ತು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಾಲು ಉತ್ಪಾದಕರು ಮತ್ತು ರಾಸುಗಳ ಉತ್ತಮ ಆರೋಗ್ಯಕ್ಕೆ ಅಗತ್ಯ ಸಹಕಾರ, ನೆರವು ನೀಡಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಭರವಸೆ ನೀಡಿದರು.
ಇದೇ ವೇಳೆ ರಾಜಾನುಕುಂಟೆ ಶಿಬಿರ ಕಚೇರಿಯ ವ್ಯವಸ್ಥಾಪಕ ಪ್ರಸನ್ನ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಾಲು ಉತ್ಪಾದಕ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.