ರಾಜಾನುಕುಂಟೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಭೂಮಿಪೂಜೆ ನೆರವೇರಿಸಿದರು.
ಯಲಹಂಕ: ರಾಜಾನುಕುಂಟೆಯಲ್ಲಿ ₹ 8 ಕೋಟಿ ವೆಚ್ಚದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಶಂಕುಸ್ಥಾಪನೆ ನೆರವೇರಿಸಿದರು.
ಪಾಲಿಟೆಕ್ನಿಕ್ ಕಾಲೇಜು ಈ ಭಾಗದಲ್ಲಿ ಇಲ್ಲದ ಕಾರಣ ವಿದ್ಯಾರ್ಥಿಗಳು ನಗರಕ್ಕೆ ತೆರಳಬೇಕಾಗಿತ್ತು. ಈ ಸಮಸ್ಯೆ ನೀಗಲಿದೆ. 15 ತಿಂಗಳೊಳಗೆ ಕಾಮಗಾರಿ ಪೂರ್ಣಗೊಂಡು ಮುಂದಿನ ಶೈಕ್ಷಣಿಕ ವರ್ಷದಿಂದ ದಾಖಲಾತಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ. ಮೋಹನ್‌ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜಾನುಕುಂಟೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಅಂಬಿಕಾ ರಾಜೇಂದ್ರಕುಮಾರ್, ಉಪಾಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹಮೂರ್ತಿ, ಕೆ.ವೀರಣ್ಣ, ಸದಸ್ಯರಾದ ಚಿಕ್ಕಣ್ಣ, ಸುಜಾತ, ಭವಾನಿ, ಬಿಜೆಪಿ ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್, ಸತೀಶ್ ಕಡತನಮಲೆ, ಮಂಜುನಾಥರೆಡ್ಡಿ, ಇಟಗಲ್‌ಪುರ ಮೋಹನ್, ಎಸ್.ಜಿ.ಪ್ರಶಾಂತ್‌ರೆಡ್ಡಿ, ಪ್ರಕಾಶ್ ಉಪಸ್ಥಿತರಿದ್ದರು.
4 ಎಕರೆ ಮಂಜೂರು
ಕಾಲೇಜಿಗೆ 4 ಎಕರೆ ಭೂಮಿ ಮಂಜೂರಾಗಿದ್ದು 28ಸಾವಿರ ಚದರಡಿ ವಿಸ್ತೀರ್ಣದಲ್ಲಿ 3 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. 9 ತರಗತಿ ಕೊಠಡಿಗಳು ಗ್ರಂಥಾಲಯ ಪ್ರಯೋಗಾಲಯ ಪ್ರಾಂಶುಪಾಲರ ಕೊಠಡಿ ಮಹಿಳೆಯರ ವಿಶ್ರಾಂತಿ ಗೃಹ ಇನ್ನಿತರೆ ಸೌಲಭ್ಯಗಳು ಲಭ್ಯವಿರಲಿವೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗಗಳು ಇರಲಿದ್ದು ರೈಟ್ಸ್ ಲಿಮಿಟೆಡ್ ರೈಲ್ವೆ ಮಂತ್ರಾಲಯ ನಿರ್ಮಾಣದ ಜವಾಬ್ದಾರಿ ಹೊತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.