ADVERTISEMENT

ರಾಜರಾಜೇಶ್ವರಿನಗರ ಠಾಣೆ ಇನ್‌ಸ್ಪೆಕ್ಟರ್ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 11:52 IST
Last Updated 24 ಅಕ್ಟೋಬರ್ 2020, 11:52 IST

ಬೆಂಗಳೂರು: ರಾಜರಾಜೇಶ್ವರಿ ನಗರ ಠಾಣೆ ಇನ್‌ಸ್ಪೆಕ್ಟರ್ ವಿ. ನವೀನ್ ಸುಪೇಕರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಆರ್.ಪಿ. ಅನಿಲ್ ಅವರನ್ನು ವರ್ಗಾಯಿಸಲಾಗಿದೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಇತ್ತೀಚೆಗೆಷ್ಟೇ ನಾಮಪತ್ರ ಸಲ್ಲಿಸುವ ವೇಳೆ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಕಾಂಗ್ರೆಸ್ ‍ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನವೀನ್ ಅವರೇ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಅವರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT