ADVERTISEMENT

ರಾಜಕಾಲುವೆ ಒತ್ತುವರಿ: ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 19:52 IST
Last Updated 28 ಜೂನ್ 2019, 19:52 IST
..
..   

ಬೆಂಗಳೂರು: ‘ಕನಕಪುರ ರಸ್ತೆಯಲ್ಲಿರುವ ಗುಬ್ಬಲಾಳು ಗೇಟ್ ಬಳಿ ಅಪಾರ್ಟ್‌ಮೆಂಟ್ ನಿರ್ಮಾಣಕ್ಕಾಗಿ ಇಸ್ಕಾನ್ ಚಾರಿಟೀಸ್ ಮತ್ತು ಮಂತ್ರಿ ಡೆವಲಪರ್ಸ್‌ನವರು ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಿ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ, ‘ಕರ್ನಾಟಕ ಹ್ಯೂಮನ್ ರೈಟ್ಸ್ ಪ್ಯಾನಲ್‌’ ಪರಿಸರ ಘಟಕ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಆಯುಕ್ತರು, ಕಂದಾಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ‘ಬಿಬಿಎಂಪಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಒಂದು ವೇಳೆ ನಿಯಮಾವಳಿ ಉಲ್ಲಂಘಿಸಿದ್ದರೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಆದೇಶಿಸಿತು. ವಿಚಾರಣೆಯನ್ನು ಆಗಸ್ಟ್‌ 6ಕ್ಕೆ ಮುಂದೂಡಲಾಗಿದೆ.

ADVERTISEMENT

‘ಬಿಡಿಎ ನಕ್ಷೆ ಉಲ್ಲಂಘಿಸಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂಬುದು ಅರ್ಜಿದಾರರ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.