ADVERTISEMENT

ರಾಜಕಾಲುವೆ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 19:30 IST
Last Updated 30 ಜನವರಿ 2023, 19:30 IST
ದೊಡ್ಡನೆಕ್ಕುಂದಿಯಲ್ಲಿ ಮೂರು ಅಂತಸ್ತಿನ ಕಟ್ಟಡ ತೆರವು ಕಾರ್ಯಾಚರಣೆ ಬಿಬಿಎಂಪಿಯಿಂದ ಸೋಮವಾರ ಆರಂಭವಾಯಿತು
ದೊಡ್ಡನೆಕ್ಕುಂದಿಯಲ್ಲಿ ಮೂರು ಅಂತಸ್ತಿನ ಕಟ್ಟಡ ತೆರವು ಕಾರ್ಯಾಚರಣೆ ಬಿಬಿಎಂಪಿಯಿಂದ ಸೋಮವಾರ ಆರಂಭವಾಯಿತು   

ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಲ ಸೇರಿ ನಾಲ್ಕು ಪ್ರದೇಶಗಳಲ್ಲಿ ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡಲಾಗಿದೆ.

ದೊಡ್ಡನೆಕ್ಕುಂದಿಯಲ್ಲಿ ಮೂರು ಅಂತಸ್ತಿನ ಕಟ್ಟಡ ತೆರವು ಕಾರ್ಯಾಚರಣೆ ಆರಂಭವಾಗಿದೆ. ಎರಡು ಅಂತಿಸ್ತಿನ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.

ಹೂಡಿ ವಾರ್ಡ್ ಸಾದರ ಮಂಗಲ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಗೋಡೆಯನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಎಂಜಿನಿಯರ್‌ಗಳು ತಿಳಿಸಿದ್ದಾರೆ.

ADVERTISEMENT

ಮಹದೇವಪುರ ವಲಯದಲ್ಲಿ ಈವರಗೆ 289 ಸರ್ವೆ ನಂಬರ್‌ಗಳಲ್ಲಿ ಒತ್ತುವರಿ ಇದೆ. 81 ತೆರವುಗೊಳಿಸಲಾಗಿದೆ. 157 ಸರ್ವೆ ನಂಬರ್‌ಗಳನ್ನು ಭೂ ಮಾಪನ ಮಾಡಲಾಗಿದ್ದು, 28 ಆದೇಶಗಳನ್ನು ಹೊರಡಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.