ADVERTISEMENT

ಬರಗೂರು ರಾಮಚಂದ್ರಪ್ಪಗೆ ‘ರಾಜ್‌ಕುಮಾರ್ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 15:23 IST
Last Updated 27 ಮಾರ್ಚ್ 2025, 15:23 IST
ಬರಗೂರು ರಾಮಚಂದ್ರಪ್ಪ
ಬರಗೂರು ರಾಮಚಂದ್ರಪ್ಪ   

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್‌ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು–ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ ಹಿರಿಯರೊಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. 

ಏಪ್ರಿಲ್‌ 18ರಂದು ಸಂಜೆ 5 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಮರ್ಶಕ ಎಚ್.ಎಸ್. ರಾಘವೇಂದ್ರ ರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.