ADVERTISEMENT

ಅಂತರರಾಷ್ಟ್ರೀಯ ಕೇಂದ್ರವಾಗಿ ರಾಜ್ ಸಮಾಧಿ ಅಭಿವೃದ್ಧಿಗೆ ಸಿ.ಎಂ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 1:52 IST
Last Updated 29 ಅಕ್ಟೋಬರ್ 2019, 1:52 IST

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಸ್ಥಳವನ್ನು ಅಂತರ ರಾಷ್ಟ್ರೀಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಮತ್ತು ಅಂಬರೀಷ್‌ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿಯನ್ನು ಸಲ್ಲಿಸಿತ್ತು. ಬೇಡಿಕೆಗಳಿಗೆ ಮುಖ್ಯಮಂತ್ರಿಯವರು ಸಕಾರಾತ್ಮಕ ವಾಗಿ ಸ್ಪಂದಿಸಿದರು ಎಂದು ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಡಾ.ರಾಜ್ ಕುಮಾರ್ ಸಮಾಧಿ ಪ್ರವಾಸೋದ್ಯಮ ತಾಣವಾಗಿದೆ. ಇದನ್ನುಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಈ ಯೋಜನೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಒಪ್ಪಿಗೆ ನೀಡಿದ್ದರು. ಅದಕ್ಕೆ ₹22 ಕೋಟಿ ಅನುದಾನ ಕೊಡಲು ಸಮ್ಮತಿ ನೀಡಿದ್ದರು. ಮೊದಲ ಹಂತವಾಗಿ ಬಜೆಟ್‌ನಲ್ಲಿ ₹10 ಕೋಟಿ ಅನುದಾನವನ್ನೂ ನಿಗದಿ ಮಾಡಿದ್ದರು ಎಂದು ಹೇಳಿದರು.

ADVERTISEMENT

ಈ ವಿಷಯವನ್ನು ಯಡಿಯೂರಪ್ಪ ಅವರ ಗಮನಕ್ಕೆ ತಂದಾಗ ತಕ್ಷಣವೇ ಒಪ್ಪಿಕೊಂಡರು. ಅಂಬರೀಷ್‌ ಪ್ರತಿಷ್ಠಾನಕ್ಕೂ ಒಂದು ಟ್ರಸ್ಟ್‌ ರಚನೆ ಆಗಬೇಕಿದೆ. ನ. 24 ರೊಳಗೆ ಟ್ರಸ್ಟ್‌ ರಚಿಸಬೇಕು ಎಂದು ಮನವಿ ಮಾಡಿದ್ದು, ಟ್ರಸ್ಟ್ ರಚನೆಯ ಭರವಸೆಯನ್ನೂ ನೀಡಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.