ADVERTISEMENT

ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಪ್ರಮುಖರ ಸಭೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 22:43 IST
Last Updated 2 ಜೂನ್ 2020, 22:43 IST
ಬಿಜೆಪಿ
ಬಿಜೆಪಿ   

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತ್ತು ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಇದೇ ವಾರ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ.

ಇದೇ 19 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಈ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಲಿದ್ದು, ಟಿಕೆಟ್‌ಗೆ ಪೈಪೋಟಿ ನಡೆದಿದೆ.

2 ಸ್ಥಾನಗಳಿಗೆ ನಾಲ್ಕು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೊಂದನ್ನು ಮಾಡಿ ಕೇಂದ್ರಕ್ಕೆ ಕಳುಹಿಸಲಿದೆ. ವರಿಷ್ಠರು ಯಾರಿಗೆ ಒಪ್ಪಿಗೆ ಕೊಡುತ್ತಾರೋ ಅವರಿಗೆ ಟಿಕೆಟ್‌ ಖಾತರಿ. ಪ್ರಭಾಕರ್‌ ಕೋರೆ ಅವರು ಮೂರನೇ ಅವಧಿಗೂ ರಾಜ್ಯಸಭೆಗೆ ಪ್ರವೇಶಿಸಲು ಬಯಸಿದ್ದಾರೆ. ಆದರೆ, ಬಿಜೆಪಿಯಲ್ಲಿ ಮೋದಿ– ಶಾ ಜೋಡಿ ಬಂದ ಬಳಿಕ ಒಬ್ಬ ವ್ಯಕ್ತಿಗೆ ಗರಿಷ್ಠ ಎರಡು ಬಾರಿ ಮಾತ್ರ ಅವಕಾಶ ನೀಡಬೇಕು ಎಂಬ ನಿರ್ಧಾರಕ್ಕೆ ಬಂದಿದೆ. ಹೀಗಾಗಿ ಮೂರನೇ ಬಾರಿಗೆ ಅವಕಾಶ ಸಿಗುವ ಸಾಧ್ಯತೆ ದೂರ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈ ಮಧ್ಯೆ ತಮಗೆ ಮತ್ತೊಂದು ಅವಧಿಗೆ ಅವಕಾಶ ಕೊಡಬೇಕು ಎಂದು ಪ್ರಭಾಕರ ಕೋರೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.