ಬೆಂಗಳೂರು: ಈ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ಗೆ ವಿವಿಧ ಕ್ಷೇತ್ರಗಳ ಸಾಧಕರ ಆಯ್ಕೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಒಟ್ಟು 64 ಮಂದಿ ಒಳಗೊಂಡ ಸಲಹಾ ಸಮಿತಿಯನ್ನು ರಚಿಸಲಾಗಿದೆ.
ಈ ಸಮಿತಿಯು ಸಾಹಿತ್ಯ, ವೈದ್ಯಕೀಯ, ಕೃಷಿ, ಸಮಾಜಸೇವೆ, ಚಲನಚಿತ್ರ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿದೆ. ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪ್ರತಿನಿಧಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ಈ ವರ್ಷ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೈ ಬಿಟ್ಟಿದೆ. ಸಲಹಾ ಸಮಿತಿಯೇ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಮಾಡುತ್ತದೆ. ಪ್ರಶಸ್ತಿಯು ತಲಾ ₹ 5 ಲಕ್ಷ ನಗದು ಹಾಗೂ 25 ಗ್ರಾಂ. ಚಿನ್ನದ ಪದಕ ಒಳಗೊಂಡಿರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.