
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ 'ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್' 5ನೇ ಹಿರಿಯ ಯುಟಿಲಿಟಿ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆಯಾಗಿದ್ದಾರೆ.
ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್, ಬ್ರೆಜಿಲ್ ಮತ್ತು ಅಮೆರಿಕದ ತಜ್ಞರು ಈ ಸಮಿತಿಯಲ್ಲಿದ್ದಾರೆ. ಆಯ್ಕೆಯಾದ ಸಮಿತಿ ಸದಸ್ಯರು ಜಾಗತಿಕ ಮಟ್ಟದಲ್ಲಿ ನೀರಿನ ಸವಾಲು, ಅದನ್ನು ಎದುರಿಸಲು ಅಗತ್ಯವಾದ ಕಾರ್ಯತಂತ್ರಗಳನ್ನು ಗುರುತಿಸುವ ಕೆಲಸ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.