ADVERTISEMENT

ಶೋಷಿತ ಸಮುದಾಯಗಳ ವಿಮೋಚನಾ ದಿನ ಫೆ. 7ರಂದು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 19:35 IST
Last Updated 4 ಫೆಬ್ರುವರಿ 2026, 19:35 IST
   

ಬೆಂಗಳೂರು: ರಮಾಬಾಯಿ ಅಂಬೇಡ್ಕರ್ ಜನ್ಮದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್‌ ವಾದ) ಫೆ. 7ರಂದು ಕಬ್ಬನ್‌ ಉದ್ಯಾನದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶೋಷಿತ ಸಮುದಾಯಗಳ ವಿಮೋಚನಾ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ಈ ಸಮಾರಂಭವನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದು, ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ, ಪ್ರೊ.ಬಿ. ಕೃಷ್ಣಪ‍್ಪ ಟ್ರಸ್ಟ್‌ನ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ, ಜಿ.ಪಲ್ಲವಿ, ಜಯದೇವಿ ಗಾಯಕ್ವಾಡ್ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT