ಬೆಂಗಳೂರು: ‘ದ್ವೇಷದಿಂದ ಏನನ್ನೂ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುವುದೇ ಹೊರತು ಪರಿಹಾರ ಕಲ್ಪಿಸುವುದಿಲ್ಲ’ ಎಂದು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನ (ಐಐಎಂಬಿ) ಪ್ರಭಾರ ನಿರ್ದೇಶಕ ಡಾ. ಯು. ದಿನೇಶ್ ಕುಮಾರ್ ಹೇಳಿದರು.
ರಾಮಯ್ಯ ಇನ್‌ಟ್ಯೂಟ್ ಆಫ್ ಟೆಕ್ನಾಲಜಿ (ಆರ್‌ಐಟಿ) ಆಯೋಜಿಸಿದ್ದ 17ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಪ್ರೀತಿ ಮತ್ತು ಸಹಾನುಭೂತಿಯಿಂದ ಮಾತ್ರ ನಾವು ಮತ್ತೊಬ್ಬರನ್ನು ಗೆಲ್ಲುವುದಕ್ಕೆ ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.
ಗೋಕುಲ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ವಿದ್ಯಾರ್ಥಿಗಳೇ ನಮ್ಮ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದುಕೊಡಲಿ’ ಎಂದರು.
ಬಿ.ಇ, ಬಿ.ಆರ್ಕ್, ಎಂ.ಟೆಕ್, ಎಂ.ಆರ್ಕ್, ಎಂಬಿಎ ಮತ್ತು ಎಂಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳ 1,278 ವಿದ್ಯಾರ್ಥಿಗಳು ಪದವಿ ಪಡೆದರು.
ಗೋಕುಲ ಎಜುಕೇಷನ್ ಫೌಂಡೇಷನ್‌ನ ಉಪಾಧ್ಯಕ್ಷ ಎಂ. ಆರ್.ಜಾನಕಿರಾಮ್, ಕಾರ್ಯದರ್ಶಿ ಎಂ.ಆರ್. ಆನಂದ ರಾಮ್, ನಿರ್ದೇಶಕರಾದ ಎಂ.ಆರ್. ಸಂಪಂಗಿ ರಾಮಯ್ಯ, ಎಂ.ಆರ್. ಕೋದಂಡ ರಾಮ್, ಆರ್‌ಐಟಿ ಪ್ರಾಂಶುಪಾಲ ಡಾ.ಎನ್.ವಿ.ಆರ್.ನಾಯ್ಡು, ಕಾರ್ಯಕಾರಿ ನಿರ್ದೇಶಕ ಡಾ.ಎಚ್.ವಿ.ಪಾಶ್ವನಾಥ, ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ. ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.