ಬೆಂಗಳೂರು: ‘ಕೋರಮಂಗಲ ಕಾಲ್ ಗರ್ಲ್ಸ್’ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಶಾಸಕ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
‘ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋರಮಂಗಲವಿದೆ. ಇದರ ಹೆಸರು ಬಳಸಿಕೊಂಡು ಅಂತರ್ಜಾಲದ ಮೂಲಕ ಹಲವು ದಿನಗಳಿಂದ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿರುವುದಾಗಿ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.