ADVERTISEMENT

ಪಠ್ಯ ಪರಿಷ್ಕರಣೆ | ರೋಹಿತ್ ಚಕ್ರತೀರ್ಥ ಒಬ್ಬ ವಿಕೃತ ಮನುಷ್ಯ: ರಾಮಲಿಂಗಾರೆಡ್ಡಿ 

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 19:40 IST
Last Updated 11 ಜೂನ್ 2022, 19:40 IST
ರಾಮಲಿಂಗಾರೆಡ್ಡಿ 
ರಾಮಲಿಂಗಾರೆಡ್ಡಿ    

ಬೆಂಗಳೂರು: ‘ಯಾವುದೇ ಅರ್ಹತೆಯಿಲ್ಲದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಗೆ ಬಿಜೆಪಿ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಜವಾಬ್ದಾರಿ ನೀಡಿದೆ. ಪಠ್ಯ ಪರಿಷ್ಕರಣೆ ನೆಪದಲ್ಲಿ ಮಹಾನ್ ವ್ಯಕ್ತಿಗಳಿಗೆ ಅಪಮಾನ ಮಾಡಿರುವ ಆತ ಒಬ್ಬ ವಿಕೃತ ಮನುಷ್ಯ. ಆತನನ್ನು ಗಡಿಪಾರು ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ‘ಪಠ್ಯ ಪರಿಷ್ಕರಣೆ ಹೆಸರಲ್ಲಿ ಇತಿಹಾಸ ತಿರುಚುವ ಪ್ರಯತ್ನ ನಡೆಯುತ್ತಿದೆ. ಪಠ್ಯದಲ್ಲಿ ನಾಡಧ್ವಜಕ್ಕೆ ಅವಮಾನ ಮಾಡಲಾಗಿದೆ. ಚಕ್ರತೀರ್ಥ ಮೂಲಕ ಮಕ್ಕಳಲ್ಲಿ ಕೋಮುವಾದ ಬೇರೂರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ’ ಎಂದು ಆರೋಪಿಸಿದರು.

‘ನಾಡಗೀತೆಗೆ ಅಪಮಾನ ಮಾಡಿ ರುವ ಚಕ್ರತೀರ್ಥ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನಿಲುವು ಸಮರ್ಥಿಸಿಕೊಂಡಿದ್ದ. ಇಂಥವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿದರೆ ಏನಾಗುತ್ತದೆ ಎಂಬುದಕ್ಕೆ ಪಠ್ಯಪುಸ್ತಕ ವಿಚಾರದಲ್ಲಿ ಆಗಿರುವ ಗೊಂದಲಗಳೇ ಸಾಕ್ಷಿ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.