ADVERTISEMENT

ಏ.2ರಿಂದ ಅಂತರರಾಷ್ಟ್ರೀಯ ಸಂಗೀತೋತ್ಸವ

ಖ್ಯಾತ ಸಂಗೀತಗಾರರಿಂದ ಸಂಗೀತ ರಸದೌತಣ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 20:29 IST
Last Updated 3 ಮಾರ್ಚ್ 2022, 20:29 IST

ಬೆಂಗಳೂರು: ‘ಶ್ರೀ ರಾಮ ಸೇವಾ ಮಂಡಳಿ ರಾಮನವಮಿ ಸೆಲಬ್ರೇಷನ್ಸ್‌ ಟ್ರಸ್ಟ್‌’ ವತಿಯಿಂದ ಏಪ್ರಿಲ್‌ 2ರಿಂದ ಮೇ 2ರವರೆಗೆ 84ನೇಯ ಶ್ರೀ ರಾಮನವಮಿ ಮತ್ತು ಅಂತರರಾಷ್ಟ್ರೀಯ ಸಂಗೀತೋತ್ಸವ ನಗರದ ಚಾಮರಾಜಪೇಟೆಯ ಹಳೇ ಕೋಟೆ ಹೈಸ್ಕೂಲ್‌ ಆವರಣದಲ್ಲಿ ಆಯೋಜಿಸಲಾಗಿದೆ.

ಖ್ಯಾತ ಸಂಗೀತಗಾರರು ಕಾರ್ಯಕ್ರಮಗಳನ್ನು ನೀಡಲಿದ್ದು, ಪ್ರತಿ ದಿನ ಶಾಸ್ತ್ರೀಯ ಸಂಗೀತದ ವಿಶಿಷ್ಟ ಕಾರ್ಯಕ್ರಮಗಳು ಸಂಗೀತ ಪ್ರಿಯರಿಗೆ ರಸದೌತಣ ನೀಡಲಿವೆ.

ಸರ್ಕಾರದ ಕೋವಿಡ್‌ ಮಾರ್ಗಸೂಚಿ ಅನ್ವಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಆಯ್ದ ಸಂಗೀತ ಕಛೇರಿಗಳನ್ನು ಹೈಬ್ರಿಡ್‌ ಮಾದರಿಯಲ್ಲಿ ನಡೆಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ADVERTISEMENT

ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಏ.10ರಂದು ‘ಭಾರತ ಸ್ವತಂತ್ರ ಸಂಗೀತ ವೈಭವಂ’ ಎನ್ನುವ ವಿಶೇಷ ಕಾರ್ಯಕ್ರಮ ನಡೆಯಲಿದೆ. ಡಾ.ಮೈಸೂರು ಮಂಜುನಾಥ್‌ ನೇತೃತ್ವದಲ್ಲಿ 75 ಸಂಗೀತಗಾರರು ನೀಡಲಿದ್ದಾರೆ.

www.ramanavamitickets.com ವೆಬ್‌ಸೈಟ್‌ ಮೂಲಕ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು.

ಮಾಹಿತಿಗಾಗಿ ಪ್ರಧಾನ ಕಾರ್ಯದರ್ಶಿ ಮತ್ತು ಮ್ಯಾನೇಜಿಂಗ್‌ ಟ್ರಸ್ಟಿ ಎಸ್‌.ಎನ್‌. ವರದರಾಜ್‌ (ಮೊಬೈಲ್‌ ದೂರವಾಣಿ ಸಂಖ್ಯೆ: 9448079079) ಅಥವಾ ಕಾರ್ಯನಿರ್ವಾಹಕ ಅಧಿಕಾರಿ ಎಸ್‌ ಅಭಿಜೀತ್‌ ವರದರಾಜ್‌ (ಮೊಬೈಲ್‌ ದೂರವಾಣಿ ಸಂಖ್ಯೆ: 9483518012) ಅಥವಾ ಕಚೇರಿ ಸಂಖ್ಯೆ 080–26604031 ಸಂಪರ್ಕಿಸಬಹುದು. ಇ–ಮೇಲ್‌ ವಿಳಾಸ: ramasevamandali@gmail.com

ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇನ್ಫೊಸಿಸ್‌ ಫೌಂಡೇಷನ್‌ ಮತ್ತು ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯಗಳು ಸಹಕಾರ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.