ಸಾಂದರ್ಭಿಕ ಚಿತ್ರ
ಬೆಂಗಳೂರು: ಮೇಲುಕೋಟೆಯ ಯದುಗಿರಿ ಯತಿರಾಜ ಶಾಖಾ ಮಠ ನೀಡುವ ‘ಶ್ರೀ ರಾಮಾನುಜಾಚಾರ್ಯ ಸದ್ಭಾವನಾ ಪ್ರಶಸ್ತಿ’ಗೆ ಪತ್ರಕರ್ತ ಹನುಮೇಶ್ ಕೆ. ಯಾವಗಲ್ ಸೇರಿ ಮೂವರು ಆಯ್ಕೆಯಾಗಿದ್ದಾರೆ.
ಆಧ್ಯಾತ್ಮಿಕ ಹಾಗೂ ಜೀವನ ಕಲೆಯ ಶಿಕ್ಷಣದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಸಂರಕ್ಷಣೆ ಮಾಡುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಟ್ರಸ್ಟಿ ರಂಗನಾಥ್ ಪ್ರಸಾದ್ ಮತ್ತು ಶಿಕ್ಷಣ, ಸಮಾಜ ಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರ್ ಐಯ್ಯಂಗಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದೇ ಶನಿವಾರ ಮಲ್ಲೇಶ್ವರದಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಧು-ವರ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವವನ್ನೂ ಅದೇ ದಿನ ನಡೆಸಲಾಗುವುದು ಎಂದು ಸಪ್ತಪದಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಾರದ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.