ADVERTISEMENT

ರಮೇಶ್ ಜಾರಕಿಹೊಳಿ ಸಿ.ಡಿ ಬ್ಲ್ಯಾಕ್‌ಮೇಲ್‌; ಆರೋಪಿಗಳಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 3:19 IST
Last Updated 9 ಜೂನ್ 2021, 3:19 IST
ರಮೇಶ ಜಾರಕಿಹೊಳಿ–ಸಾಂದರ್ಭಿಕ ಚಿತ್ರ
ರಮೇಶ ಜಾರಕಿಹೊಳಿ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಿ.ಡಿ ಸೃಷ್ಟಿಸಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬ್ಲ್ಯಾಕ್‌ಮೇಲ್‌ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಎಂಬುವರಿಗೆ ನಗರದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

‘ಕೆಲಸದ ಆಮಿಷವೊಡ್ಡಿದ್ದ ರಮೇಶ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿ ಯುವತಿಯೊಬ್ಬರು ಕಬ್ಬನ್‌ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಅದರ ಬೆನ್ನಲ್ಲೇ ಸದಾಶಿವನಗರ ಠಾಣೆಗೆ ದೂರು ನೀಡಿದ್ದ ರಮೇಶ ಜಾರಕಿಹೊಳಿ, ‘ಸಿ.ಡಿ ಸೃಷ್ಟಿಸಿರುವ ಕೆಲವರು ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ರಾಜಕೀಯವಾಗಿ ಮುಗಿಸುವ ಷಡ್ಯಂತ್ರವಿದು’ ಎಂದು ಆರೋಪಿಸಿದ್ದರು.

ಎರಡೂ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದೆ.

ADVERTISEMENT

ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಹಾಗೂ ಆರೋಪಿ ರಮೇಶ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಹೇಳಿಕೆಯನ್ನೂ ಪಡೆದಿದೆ. ಸದಾಶಿನಗರ ಠಾಣೆ ಪ್ರಕರಣದಲ್ಲಿ ಸುದ್ದಿವಾಹಿನಿಗಳಲ್ಲಿ ಕೆಲಸ ಮಾಡಿದ್ದ ನರೇಶ್ ಗೌಡ ಹಾಗೂ ಶ್ರವಣ್ ಪಾತ್ರವಿರುವ ಮಾಹಿತಿ ಎಸ್‌ಐಟಿಗೆ ಸಿಕ್ಕಿದೆ. ಆದರೆ, ಅವರಿಬ್ಬರು ತಲೆಮರೆಸಿಕೊಂಡಿದ್ದಾರೆ.

ಬಂಧನ ಭೀತಿಯಲ್ಲಿರುವ ನರೇಶ್ ಹಾಗೂ ಶ್ರವಣ್, ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸ್ಥಳೀಯ ನ್ಯಾಯಾಲಯ, ಜಾಮೀನು ಮಂಜೂರು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.