ADVERTISEMENT

ಇಂದು ಕೇಂದ್ರ ಸಚಿವರ ಜತೆ ಜಾರಕಿಹೊಳಿ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 20:17 IST
Last Updated 25 ಫೆಬ್ರುವರಿ 2020, 20:17 IST

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬುಧವಾರ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಲಿದ್ದಾರೆ.

ನದಿ ನೀರು ಹಂಚಿಕೆಯ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ತಾಂತ್ರಿಕ ಅಧಿಕಾರಿಗಳ ಸಭೆಯನ್ನೂ ಜಾರಕಿಹೊಳಿ ದೆಹಲಿಯಲ್ಲಿ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT