ADVERTISEMENT

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಶಂಕಿತರು ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 15:42 IST
Last Updated 29 ಏಪ್ರಿಲ್ 2024, 15:42 IST
<div class="paragraphs"><p>ಮುಸಾವೀರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮಥೀನ್ ಅಹ್ಮದ್ ತಾಹಾ</p></div>

ಮುಸಾವೀರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮಥೀನ್ ಅಹ್ಮದ್ ತಾಹಾ

   

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮ್ಮದ್ ತಾಹಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ಬಾಂಬ್ ಸ್ಫೋಟ ನಡೆದಿತ್ತು. ಮುಸಾವೀರ್‌ ಹಾಗೂ ತಾಹಾನನ್ನು ಏಪ್ರಿಲ್ 12ರಂದು ಬಂಧಿಸಿದ್ದ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಏಪ್ರಿಲ್ 29ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದರು.

ADVERTISEMENT

ಕಸ್ಟಡಿ ಅವಧಿ ಮುಗಿದಿದ್ದರಿಂದ ಇಬ್ಬರನ್ನೂ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಯಿತು.

‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿ ಕಲೆಹಾಕಲಾಗಿದೆ. ಮಹಜರು ಬಹುತೇಕ ಪೂರ್ಣಗೊಂಡಿದೆ. ಸದ್ಯಕ್ಕೆ ಆರೋಪಿಗಳ ಕಸ್ಟಡಿ ಅಗತ್ಯವಿಲ್ಲ’ ಎಂದು ಎನ್‌ಐಎ ಅಧಿಕಾರಿಗಳು ಹೇಳಿದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಇಬ್ಬರೂ ಶಂಕಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ಸದ್ಯ ಇಬ್ಬರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.