ADVERTISEMENT

ನಟಿ ರಮ್ಯಾಗೆ ಬೆದರಿಕೆ: ಮತ್ತೆ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 19:38 IST
Last Updated 18 ಆಗಸ್ಟ್ 2025, 19:38 IST
<div class="paragraphs"><p>ನಟಿ ರಮ್ಯಾ</p></div>

ನಟಿ ರಮ್ಯಾ

   

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಉಡುಪಿಯ ಸುಜನ್ ಮತ್ತು ಆದರ್ಶ್ ಬಂಧಿತರು. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ADVERTISEMENT

ಪ್ರಕರಣ ದಾಖಲಾದ ಬಳಿಕ ಓಬಣ್ಣ, ಗಂಗಾಧರ್, ರಾಜೇಶ್, ಭುವನ್‍ಗೌಡ, ಮಂಜುನಾಥ್, ಪ್ರಮೋದ್‌ಗೌಡ ಹಾಗೂ ವಿಜಯಪುರದ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಎಲ್ಲ ಆರೋಪಿಗಳನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್ ಸಿಂಗ್‌ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.