ADVERTISEMENT

ರಾಣಿ ಅಬ್ಬಕ್ಕ ಉತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 5:06 IST
Last Updated 13 ಮಾರ್ಚ್ 2023, 5:06 IST
‘ರಾಣಿ ಅಬ್ಬಕ್ಕ ಪ್ರಶಸ್ತಿ’ಯನ್ನು ಬೆಂಗಳೂರು ಮಾಜಿ ಉಪಮಹಾಪೌರರಾದ ಹೇಮಲತಾ ಗೋಪಾಲಯ್ಯ ಅವರಿಗೆ ನೀಡಿ ಸನ್ಮಾನಿಸಲಾಯಿತು
‘ರಾಣಿ ಅಬ್ಬಕ್ಕ ಪ್ರಶಸ್ತಿ’ಯನ್ನು ಬೆಂಗಳೂರು ಮಾಜಿ ಉಪಮಹಾಪೌರರಾದ ಹೇಮಲತಾ ಗೋಪಾಲಯ್ಯ ಅವರಿಗೆ ನೀಡಿ ಸನ್ಮಾನಿಸಲಾಯಿತು   

ಬೆಂಗಳೂರು: ಉಳ್ಳಾಲದ ರಾಣಿ ಅಬ್ಬಕ್ಕ ದೇವಿಯ ಹೋರಾಟ, ಧೈರ್ಯ, ಸಾಹಸವನ್ನು ಪ್ರತಿಬಿಂ ಬಿಸುವ ‘ಉಳ್ಳಾಲದ ರಾಣಿ ಅಬ್ಬಕ್ಕ ಉತ್ಸವ’ವನ್ನು ರಾಣಿ ಅಬ್ಬಕ್ಕ ಪ್ರತಿಷ್ಠಾನದ ವತಿಯಿಂದ ಮಹಾಲಕ್ಷ್ಮೀ ಲೇಔಟ್ ಭಾನುವಾರ ಆಚರಿಸಲಾಯಿತು.

ಅಬಕಾರಿ ಸಚಿವ ಗೋಪಾಲಯ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ‘16ನೇ ಶತಮಾನದಲ್ಲೇ ರಾಣಿ ಅಬ್ಬಕ್ಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ದಿಟ್ಟ ಮಹಿಳೆ’ ಎಂದರು.

ಎಂ.ಆರ್.ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಸಮೂಹ ಸಂಸ್ಥೆಯ ಉಪೇಂದ್ರ ಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ರಾಣಿ ಅಬ್ಬಕ್ಕ ಪ್ರತಿಷ್ಠಾನದ ಅಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್, ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಪುರುಷೋತ್ತಮ ಷೇಂಡ್ಲಾ, ಗೌರವ ಕಾರ್ಯದರ್ಶಿ ಅಜಿತ್ ಹೆಗ್ಡೆ, ಪ್ರಧಾನ ಸಂಚಾಲಕ ದೀಪಕ್ ಶೆಟ್ಟಿ ಇದ್ದರು.

ADVERTISEMENT

ರಾಣಿ ಅಬ್ಬಕ್ಕ ಪ್ರತಿಷ್ಠಾನದ ವತಿಯಿಂದ ಮೊದಲ ಬಾರಿಗೆ ಬೆಂಗಳೂರಿನಲ್ಲಿ ‘ರಾಣಿ ಅಬ್ಬಕ್ಕ
ಪ್ರಶಸ್ತಿ’ಯನ್ನು ಬೆಂಗಳೂರು ಮಾಜಿ ಉಪಪೌರರಾದ ಹೇಮಲತಾ ಗೋಪಾಲಯ್ಯ ಅವರಿಗೆ ನೀಡಿ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.