ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗಾಂಧಿನಗರ ವಿಧಾನಸಭೆ ಘಟಕವು ಇದೇ 27ರಂದು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕಿ ರಾಣಿ ಗೋವಿಂದರಾಜು ಆಯ್ಕೆಯಾಗಿದ್ದಾರೆ.
ಸಮ್ಮೇಳನದ ಅಂಗವಾಗಿ ಓಕಳಿಪುರ ಸಮೀಪದ ಶ್ರೀರಾಮಪುರ ಸನ್‌ರೈಸ್ ಸರ್ಕಲ್ ಮುಖ್ಯರಸ್ತೆಯಿಂದ ಶೇಷಾದ್ರಿಪುರಂ ಕಾಲೇಜಿನವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಸಾಹಿತ್ಯ ಸಮ್ಮೇಳನ ಸಮಾರಂಭವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡುತ್ತಾರೆ. ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಘಟಕದ ಅಧ್ಯಕ್ಷ ಗೌಡಗೆರೆ
ಮಾಯುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.