ADVERTISEMENT

ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 20:06 IST
Last Updated 30 ಮಾರ್ಚ್ 2022, 20:06 IST
   

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ನಗರದ ಪೊಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹ 3 ಸಾವಿರ ದಂಡ ವಿಧಿಸಿದೆ.

ಕಿರಣ್‌ ಕುಮಾರ್‌ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಎಫ್‌ಟಿಎಸ್‌ಸಿ–3ನೇ ನ್ಯಾಯಾಲಯದ ನ್ಯಾಯಾಧೀಶೆ ಇಶ್ರತ್ ಜಹಾನ್ ಆರಾ ಶಿಕ್ಷೆ ವಿಧಿಸಿದ್ದು, ದಂಡದ ಮೊತ್ತ ಪಾವತಿಸದೇ ಇದ್ದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.

ಪ್ರಕರಣವೇನು?:‘ಕಿರಣ್ ಕುಮಾರ್ ಪರಿಚಯಸ್ಥ ಬಾಲಕಿಯ ಮೇಲೆ 2014ರ ಅಕ್ಟೋಬರ್ 30ರಂದು ಅತ್ಯಾಚಾರ ಎಸಗಿದ್ದ’ ಎಂದು ಮಡಿವಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ನಂತರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಸಿಸಿಎಚ್–55, ಎಫ್‌ಟಿಸಿ–3ನೇ ಕೋರ್ಟ್‌ ಇದೇ 28ರಂದು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಾಸಿಕ್ಯೂಷನ್‌ ಪರ ಕೃಷ್ಣವೇಣಿ ಮತ್ತು ಗೊರವರ ಗೀತಾ ರಾಮಕೃಷ್ಣ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.