ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಸಮಗ್ರ ತನಿಖೆಗೆ ಶಾಸಕ ಬೈರತಿ ಬಸವರಾಜ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2025, 16:04 IST
Last Updated 15 ಜನವರಿ 2025, 16:04 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ಕೆ.ಆರ್.ಪುರ: ಆರು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವಂತೆ ಶಾಸಕ ಬೈರತಿ ಬಸವರಾಜ ಅವರು ಪೋಲಿಸರಿಗೆ ಸೂಚಿಸಿದರು.

ಹೊಯ್ಸಳನಗರದಲ್ಲಿ ನಡೆದ ಅತ್ಯಾಚಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕರು, ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ಸ್ಥಳದಲ್ಲಿದ್ದ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.

‘ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಅತ್ಯಾಚಾರ ಎಸಗುವ ಪ್ರತಿಯೊಬ್ಬನಿಗೆ ನಡುಕ ಹುಟ್ಟಿಸುವಂತ ಶಿಕ್ಷೆ ನೀಡಬೇಕು. ಬಾಲಕಿಯ ಪೋಷಕರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡುವೆ’ ಎಂದು ಬಸವರಾಜ ಹೇಳಿದರು.

ADVERTISEMENT

‘ಹೊರ ರಾಜ್ಯಗಳಿಂದ ಕೂಲಿ ಕೆಲಸಕ್ಕೆ ಬರುವವರ ಮೇಲೆ ಪೊಲೀಸರು ನಿಗಾ ಇಡಬೇಕು. ಇಂತಹ ಕೃತ್ಯಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರೂ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದರು. ಬಿಜೆಪಿ ಉಪಾಧ್ಯಕ್ಷ ಗಣೇಶ್ ರೆಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.