ಸಾಂದರ್ಭಿಕ ಚಿತ್ರ
ಬೆಂಗಳೂರು: ಬಾಲಕಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಕಾಡುಗೋಡಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಏಪ್ರಿಲ್ 24ರಂದು ನಡೆದಿರುವ ದೌರ್ಜನ್ಯ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಾದ ಸಚಿನ್ ಹಾಗೂ ಶೇಖರ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬಾಲಕಿಯು ಪೋಷಕರ ಜೊತೆ ವಾಸವಿದ್ದಳು. ಇವರ ಮನೆ ಸಮೀಪದಲ್ಲಿಯೇ ಆರೋಪಿಗಳು ನೆಲೆಸಿದ್ದರು. ಬಾಲಕಿಯ ಪೋಷಕರು ಕೆಲಸ ನಿಮಿತ್ತ ಮನೆಯಿಂದ ಹೊರಗಡೆ ಹೋಗಿದ್ದರು. ತಿಂಡಿ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, ಬಾಲಕಿಯನ್ನು ಮನೆಗೆ ಕೊರೆದೊಯ್ದಿದ್ದರು. ಅಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು’ ಎಂದು ತಿಳಿಸಿದರು.
‘ತೀವ್ರ ನೋವಿನಿಂದ ಬಾಲಕಿ ಚೀರಾಡಿದ್ದಳು. ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಆರೋಪಿಗಳನ್ನು ಹಿಡಿದು ಥಳಿಸಿದ್ದರು. ಗಸ್ತು ವಾಹನ ಸಿಬ್ಬಂದಿ ಕೈಗೆ ಆರೋಪಿಗಳನ್ನು ಒಪ್ಪಿಸಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.