ಕಡಲೆಕಾಯಿ ಪರಿಷೆ (ಸಂಗ್ರಹ ಚಿತ್ರ)
ಕೆಂಗೇರಿ: ಸೋಂಪುರ ಬಸವೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14ರಂದು ಬಸವೇಶ್ವರ ಸ್ವಾಮಿ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ನಡೆಯಲಿದೆ.
ಲಕ್ಷಾಂತರ ಜನ ಪಾಲ್ಗೊಳ್ಳುವ ಜಾತ್ರೆಯಲ್ಲಿ ಶ್ರೀಶೈಲ ಭ್ರಮರಾಂಭಿಕಾದೇವಿ ಮಲ್ಲಿಕಾರ್ಜುನ ಸ್ವಾಮಿ ಕಲ್ಯಾಣೋತ್ಸವ ಆಯೋಜಿಸಲಾಗಿದೆ. ಅನ್ನದಾಸೋಹ, ಕಡಲೆಕಾಯಿ, ಕಬ್ಬು ವಿತರಣೆ, ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
‘ಬೆಳಿಗ್ಗೆ ಜಾತ್ರೆ ಆರಂಭವಾಗಲಿದೆ. ಮಧ್ಯಾಹ್ನ 12ಕ್ಕೆ ರಥೋತ್ಸವ ಜರುಗಲಿದೆ. 500ಕ್ಕೂ ಅಧಿಕ ಗರ್ಭಿಣಿಯರಿಗೆ ಸೀಮಂತ ಹಮ್ಮಿಕೊಳ್ಳಲಾಗಿದೆ. ಲಾಟರಿ ಮೂಲಕ ಆಯ್ಕೆಯಾಗುವ 5 ಮಂದಿ ಅದೃಷ್ಟಶಾಲಿ ಗರ್ಭಿಣಿಯರ ಸಂಪೂರ್ಣ ಪ್ರಸೂತಿ ವೆಚ್ಚವನ್ನು ಭರಿಸಲಾಗುವುದು’ ಎಂದು ಬಸವಣ್ಣ ದೇವರ ಸೇವಾ ಸಮಿತಿ ಅಧ್ಯಕ್ಷ ಎಂ. ರುದ್ರೇಶ್ ತಿಳಿಸಿದ್ದಾರೆ.
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮುಮ್ಮಡಿ ನಿರ್ವಾಣ ಸ್ವಾಮೀಜಿ, ಶ್ರೀರಂಗಪಟ್ಟಣದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಮುಮ್ಮಡಿ ಶಿವರುದ್ರ ಸ್ವಾಮೀಜಿ, ಬಂಡೇಮಠದ ಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದರಾದ ಯದುವೀರ್ ಒಡೆಯರ್, ಡಾ.ಸಿ.ಎನ್.ಮಂಜುನಾಥ್, ಶೋಭಾ ಕರಂದ್ಲಾಜೆ, ಉದ್ಯಮಿ ಅಶೋಕ್ ಖೇಣಿ, ಶಾಸಕ ಎಸ್.ಟಿ. ಸೋಮಶೇಖರ್ ಭಾಗವಹಿಸಲಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.