ADVERTISEMENT

ಕಸ್ಟಡಿಗೆ ರವಿ ಪೂಜಾರಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 20:45 IST
Last Updated 17 ನವೆಂಬರ್ 2020, 20:45 IST

ಬೆಂಗಳೂರು: ಸೆನೆಗಲ್‌ನಲ್ಲಿ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.

ಕೊಲೆ, ಕೊಲೆ ಯತ್ನ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದರು. ಆತ ಭಾಗಿಯಾಗಿದ್ದ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕಸ್ಟಡಿ ಅವಧಿ ಮುಗಿದ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ‘ಮುಂಬೈನಲ್ಲಿ ನಡೆದಿದ್ದ ಬಿಲ್ಡರ್ ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರವಿದ್ದು, ಆತನನ್ನು ಕಸ್ಟಡಿಗೆ ನೀಡಿ’ ಎಂದು ಮುಂಬೈ ಪೊಲೀಸರು, 62ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ರವಿ ಪೂಜಾರಿಯನ್ನು ಮುಂದಿನ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ ವಹಿಸಿದೆ. ಜೈಲಿಗೆ ಭೇಟಿ ನೀಡಲಿರುವ ಮುಂಬೈ ಪೊಲೀಸರು, ಕಾನೂನು ಪ್ರಕ್ರಿಯೆಯನ್ನು ಮುಗಿಸಿ ರವಿ ಪೂಜಾರಿಯನ್ನು ಮುಂಬೈಗೆ ಕರೆದೊಯ್ಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.