ADVERTISEMENT

ರವಿಕುಮಾರ್ ಪ್ರಕರಣ: ನೀತಿ ನಿರೂಪಣಾ ಸಮಿತಿಗೆ ವಹಿಸುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 10:09 IST
Last Updated 4 ಮಾರ್ಚ್ 2020, 10:09 IST
ಎನ್. ರವಿಕುಮಾರ್
ಎನ್. ರವಿಕುಮಾರ್   

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನೀತಿ ನಿರೂಪಣಾ ಸಮಿತಿಯ ಸಲಹೆ ಪಡೆಯುವ ಸಾಧ್ಯತೆ ಇದೆ.

ವಿಧಾನ ಪರಿಷತ್‌ನಲ್ಲಿ ಬುಧವಾರ ವಿರೋಧ ಪಕ್ಷಗಳಿಂದ ರವಿಕುಮಾರ್ ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿದಿತ್ತು. ಸ್ಪ,ಷ್ಟೀಕರಣ ಕೊಡಲು ರವಿಕುಮಾರ್ ಅವರಿಗೆ ಅವಕಾಶ ಕೊಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಹೇಡಿ ಎಂದು ಕರೆದ ದೊರೆಸ್ವಾಮಿ ಅವರ ವಿಚಾರದಲ್ಲಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದರು.

ಆಗ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು, ನಿಯಮ 242 ಬಿ ಅಡಿಯಲ್ಲಿ ನೀತಿ ನಿರೂಪಣಾ ಸಮಿತಿಗೆ ಈ ವಿಷಯ ವಹಿಸುವಂತೆ ತಾವು ಅರ್ಜಿ ಸಲ್ಲಿಸಿದ್ದಾಗಿ ತಿಳಿಸಿದರು. ಸಭಾಪತಿ ಅವರು ಇದಕ್ಕೆ ಸಮ್ಮತಿ ಸೂಚಿಸಿ, ಇದು ಸಮಿತಿಗೆ ವಹಿಸುವ ಸೂಕ್ತ ಪ್ರಕರಣವೇ ಎಂಬುದನ್ನು ಪರಿಶೀಲಿಸಿದ ಬಳಿಕ ನಿರ್ಧಾರಕ್ಕೆ ಬರುವುದಾಗಿ ಹೇಳಿದರು.

ADVERTISEMENT

ಹೀಗಾಗಿ ಪ್ರತಿಭಟನೆ ಕೊನೆಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.