ADVERTISEMENT

ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ, ಎಲ್ಲರೂ ಸುರಕ್ಷಿತವಾಗಿರಿ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 14:19 IST
Last Updated 4 ಜೂನ್ 2025, 14:19 IST
   

ಬೆಂಗಳೂರು: 'ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

'ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ' ಎಂದು ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.

ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಾದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.