ರಾಜರಾಜೇಶ್ವರಿ ನಗರ: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗ್ರಾಮ ಪಂಚಾಯಿತಿ ನೀಡುವ ಸವಲತ್ತುಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸಬೇಕು’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸಲಹೆ ನೀಡಿದರು.
ಚುಂಚನಕುಪ್ಪೆ ಗ್ರಾಮ ಪಂಚಾಯಿತಿಯಿಂದ ನೀಡಿದ ಆಹಾರದ ಕಿಟ್‌ಗಳನ್ನು ಕೋಲೂರು ಗ್ರಾಮದಲ್ಲಿ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.
’ಯಶವಂತಪುರ ಕ್ಷೇತ್ರದ ನಗರ, ಗ್ರಾಮೀಣ ಭಾಗದಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಸಂಪರ್ಕ, ರಸ್ತೆ ಅಭಿವೃದ್ಧಿ ಕಾಮಗಾರಿ, ವೈಟ್ ಟಾಪಿಂಗ್, ಒಳಚರಂಡಿ ಕಾಮಗಾರಿ ನಡೆಯುತ್ತಿವೆ’ ಎಂದರು.
’ಕ್ಷೇತ್ರವು ಬಹುತೇಕ ಕಂದಾಯ ಬಡಾವಣೆಗಳಿಂದ ಕೂಡಿದ್ದು. ತುಮಕೂರು ರಸ್ತೆಯಿಂದ ಹಾರೋಹಳ್ಳಿವರೆಗಿನ ಗಿರಿಗೌಡನದೊಡ್ಡಿ, ಆರ್.ಆರ್.ನಗರದ ರಾಜರಾಜೇಶ್ವರಿ ದೇವಸ್ಥಾನದಿಂದ ಮಂಚನಬೆಲೆ ಜಲಾಶಯದ ಚಿಕ್ಕನಹಳ್ಳಿವರೆಗೆ ವ್ಯಾಪಿಸಿದೆ. ಹಂತ ಹಂತವಾಗಿ ಎಲ್ಲ ಪ್ರದೇಶಗಳಲ್ಲೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ’ ಎಂದರು.
ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಂಕಜ ಸೇರಿದಂತೆ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.