ADVERTISEMENT

ಶಾಲಾ–ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಎಚ್‌.ಸಿ.ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 1 ಜೂನ್ 2023, 15:59 IST
Last Updated 1 ಜೂನ್ 2023, 15:59 IST
   

ಬೆಂಗಳೂರು: ರಾಜ್ಯದ ಎಲ್ಲ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು (preamble) ಓದಿ, ಅರ್ಥೈಸಿಕೊಳ್ಳಲು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸೂಚನೆ ನೀಡಿದ್ದಾರೆ.

ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಈ ಸಂಬಂಧ ಆದೇಶ ಹೊರಡಿಸುವಂತೆಯೂ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಬೇಕು. ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಪ್ರಸ್ತಾವನೆ ಓದಬೇಕು. ಇದಕ್ಕಾಗಿ ಪ್ರತ್ಯೇಕ ಆದೇಶ ಹೊರಡಿಸಬೇಕು ಎಂದು ಹೇಳಿದರು.

ADVERTISEMENT

ಪರಿಶಿಷ್ಟ ಜಾತಿ, ಪಂಗಡಗಳು ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಿಲ್ಲ ಎಂಬ ಕಾರಣಕ್ಕೆ  ಶಾಲಾ–ಕಾಲೇಜುಗಳ ಪ್ರವೇಶ ನೀಡುವುದಕ್ಕೆ ಅಡ್ಡಿ ಪಡಿಸುವಂತಿಲ್ಲ. ಮೊದಲಿಗೆ ಪ್ರವೇಶ ನೀಡಬೇಕು ಎಂದು ಮಹದೇವಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.