ADVERTISEMENT

ಮಾಹಿತಿ ಆಯುಕ್ತರ ಆಯ್ಕೆ; ಅರ್ಹತಾ ಪಟ್ಟಿಗೆ ಸಿದ್ದರಾಮಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 15:43 IST
Last Updated 27 ಆಗಸ್ಟ್ 2024, 15:43 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಮಾಹಿತಿ ಆಯುಕ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಆಧರಿಸಿ ಪಟ್ಟಿ ಸಿದ್ಧ‍ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ADVERTISEMENT

ಮಾಹಿತಿ ಆಯುಕ್ತರ ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾಹಿತಿ ಆಯುಕ್ತರ ಆರು ಹುದ್ದೆಗಳು ಖಾಲಿ ಇದ್ದು, 586 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ವಿವರ ನೀಡಿದರು.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ‘ಅರ್ಜಿಗಳನ್ನು ಪರಿಶೀಲಿಸಬೇಕು. ಮಾನದಂಡ ಅನ್ವಯಿಸಿ, ಅರ್ಹತಾ ಪಟ್ಟಿ ಸಿದ್ಧಪಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ  ಸುಪ್ರೀಂ ಕೋರ್ಟ್‌ ಕಳೆದ ವರ್ಷ ಕೆಲ ಮಾರ್ಗಸೂಚಿಗಳನ್ನು ನಿಗದಿ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯನ್ನು ಕೋರ್ಟ್‌ ನಿರ್ದೇಶನದಂತೆ ಅಂತಿಮಗೊಳಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಅತ್ಯಂತ ಅರ್ಹತಾ ಅಂಶಗಳನ್ನು ಹೊಂದಿರುವ 20 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಬೇಕು. ಸೆ. 5ಕ್ಕೆ ಮತ್ತೆ ಸಭೆ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.