ADVERTISEMENT

‌ಕೋವಿಡ್: ರಜಾ ದಿನಗಳಲ್ಲಿಯೂ ಕೆಲಸಕ್ಕೆ ಸಿದ್ಧರಾಗಿ; ಆರೋಗ್ಯ ಇಲಾಖೆ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 21:01 IST
Last Updated 8 ಜನವರಿ 2022, 21:01 IST
   

ಬೆಂಗಳೂರು: ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರ್ವಜನಿಕ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲು ಸಜ್ಜಾಗಿರಬೇಕು ಎಂದು ಆರೋಗ್ಯ ಇಲಾಖೆ ತನ್ನಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಇಲಾಖೆಯ ಆಯುಕ್ತ ಡಿ. ರಂದೀಪ್, ‘ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ವೇಳೆ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು. ಯಾವುದೇ ಕ್ಷಣದಲ್ಲಿ ತುರ್ತು ಸಭೆಗಳು ಹಾಗೂ ತ್ವರಿತ ನಿಯಂತ್ರಣ ಕಾರ್ಯಗಳನ್ನು ಕೈಗೊಳ್ಳಬೇಕಾಗಿ ಬರುತ್ತದೆ. ಆದ್ದರಿಂದ ಪೂರ್ವಾನುಮತಿ ಇಲ್ಲದೆಯೇ ಕೇಂದ್ರ ಸ್ಥಾನ ಬಿಟ್ಟು ತೆರಳುವಂತಿಲ್ಲ’ ಎಂದು ಹೇಳಿದ್ದಾರೆ.

‘ಅಧಿಕಾರಿಗಳು ಹಾಗೂ ಸಿಬ್ಬಂದಿಸೂಚನೆಗಳನ್ನು ತ್ವರಿತವಾಗಿ ಪಾಲಿಸಬೇಕಾಗುತ್ತದೆ. ತುರ್ತು ಸಂದರ್ಭಗಳಲ್ಲಿ, ರಜಾ ದಿನಗಳಲ್ಲಿಯೂ ಮೇಲಾಧಿಕಾರಿಗಳು ವಹಿಸಿದ ಕೆಲಸಗಳನ್ನು ಪೂರ್ಣಗೊಳಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.