
ಕೆಂಗೇರಿ: ಮಕ್ಕಳ ಕಲಿಕೆಯ ಆಸಕ್ತಿ ಗುರುತಿಸಿ ಅದನ್ನು ಪ್ರೋತ್ಸಾಹಿಸಬೇಕು. ಪೋಷಕರು ಒತ್ತಡ ಹೇರದಂತೆ ನೋಡಿಕೊಳ್ಳಬೇಕು ಎಂದು ಚಲನಚಿತ್ರ ನಟ ರಮೇಶ್ ಭಟ್ ಹೇಳಿದರು.
ರಾಮೋಹಳ್ಳಿ ಗ್ರಾಮದ ಎಲ್ಎನ್ಆರ್ ಶಾಲೆಯ 17ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ, ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಪಠ್ಯ ಚಟುವಟಿಕೆ ಅಷ್ಟೇ ಅಲ್ಲದೆ ಮಕ್ಕಳಲ್ಲಿರುವ ವಿಶೇಷ ಕಲೆ ಗುರುತಿಸಿ, ಪ್ರೋತ್ಸಾಹಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಕಾರಣಕರ್ತರಾಗಬೇಕು. ಅಂಕ ಒಂದೇ ಮಾನದಂಡವಾಗಬಾರದು ಎಂದು ಹೇಳಿದರು.
ಸಮಾರಂಭದಲ್ಲಿ ಚಲನಚಿತ್ರ ನಟಿ ಭವ್ಯ, ಶಿಕ್ಷಣ ತಜ್ಞೆ ಗೀತಾ ರಾಮಾನುಜಮ್, ಚಲನಚಿತ್ರ ನಟಿ ರಂಜಿನಿ, ರಾಣಾ, ಕಿರುತೆರೆ ನಟ ಪ್ರಕಾಶ್, ಪತ್ರಕರ್ತ ಸುಧೀಂದ್ರ ಕುಮಾರ್, ಯುದ್ಧಭೂಮಿ ಹೋರಾಟ ಸೇನೆ ಅಧ್ಯಕ್ಷ ಹೇಮಂತರಾಜ್, ಶಿಕ್ಷಣ ಸಂಸ್ಥೆ ಸಂಸ್ಥಾಪಕ ಲಕ್ಷ್ಮೀನಾರಾಯಣ ಅರಸು, ಪ್ರಾಂಶುಪಾಲೆ ಅರುಣ ಉಪಸ್ಥಿತರಿದ್ದರು.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.