
ಬೆಂಗಳೂರು: ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಬಾಗಲೂರಿನ ವಿಜಯ ಜ್ಯೋತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ವಿಜಯ ಜ್ಯೋತಿ ಗಾನ ವೈಭವ’ ಸಮೂಹಗಾಯನವು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮಾನ್ಯತೆ ಪಡೆಯಿತು.
ಸಮೂಹಗಾಯನದಲ್ಲಿ ಒಂದೇ ಶಿಕ್ಷಣ ಸಂಸ್ಥೆಯ 1,166 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಾದ್ಯವೃಂದದೊಂದಿಗೆ 11 ಕನ್ನಡ ಗೀತೆಗಳನ್ನು ಒಟ್ಟಿಗೆ ಪ್ರಸ್ತುತಪಡಿಸಿದರು.
ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ರಾಮಚಂದ್ರ ಮಾತನಾಡಿ, ‘ಇಂತಹ ಐತಿಹಾಸಿಕ ಕಾರ್ಯಕ್ರಮವನ್ನು ವಿಜಯ ಜ್ಯೋತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆಸಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಸ್ಥೆಯ ಗೌರವ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಶಿವ ಚಿತ್ತಪ್ಪ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮಲ್ಲೇಪುರಂ ವೆಂಕಟೇಶ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರ ಹರೀಶ್, ಉಪನ್ಯಾಸಕಿ ಕವಿತಾ ಮಧುಕುಮಾರ್, ವಿಜಯ ಜ್ಯೋತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಧುಕುಮಾರ್, ಇತಿಹಾಸ ಉಪನ್ಯಾಸಕ ಆನಂದ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.