ADVERTISEMENT

‘ರಕ್ತದಾನ ವ್ಯಕ್ತಿತ್ವದ ಭಾಗವಾಗಲಿ’

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 20:21 IST
Last Updated 14 ಜೂನ್ 2019, 20:21 IST
ಕಾರ್ಯಕ್ರಮದಲ್ಲಿ ರಕ್ತದಾನಿಗಳಿಗೆ ಸನ್ಮಾನ ಮಾಡಲಾಯಿತು. ರವಿ ಡಿ.ಚನ್ನಣ್ಣನವರ್, ಡಾ.ಬಿ.ಎಲ್.ಸುಜಾತ ರಾಥೋಡ್, ಎಸ್.ನಾಗಣ್ಣ, ಮೇಜರ್ ಎನ್.ಜೆ.ಜಾರ್ಜ್ ಇದ್ದಾರೆ
ಕಾರ್ಯಕ್ರಮದಲ್ಲಿ ರಕ್ತದಾನಿಗಳಿಗೆ ಸನ್ಮಾನ ಮಾಡಲಾಯಿತು. ರವಿ ಡಿ.ಚನ್ನಣ್ಣನವರ್, ಡಾ.ಬಿ.ಎಲ್.ಸುಜಾತ ರಾಥೋಡ್, ಎಸ್.ನಾಗಣ್ಣ, ಮೇಜರ್ ಎನ್.ಜೆ.ಜಾರ್ಜ್ ಇದ್ದಾರೆ   

ಬೆಂಗಳೂರು: ‘ಪ್ರತಿಯೊಬ್ಬ ನಾಗರಿಕರು ರಕ್ತದಾನ ಮಾಡುವುದನ್ನು ರೂಢಿಸಿಕೊಳ್ಳಬೇಕು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ಪ್ರಜ್ಞಾವಂತಿಕೆಯಕರ್ತವ್ಯ.ರಕ್ತದಾನ ವ್ಯಕ್ತಿತ್ವದ ಭಾಗವಾಗಬೇಕು’ ಎಂದುಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅಭಿಪ್ರಾಯಪಟ್ಟರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ವಿಶ್ವರಕ್ತದಾನಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಿಂಟೊ ಕಣ್ಣಿನ ಆಸ್ಪತ್ರೆಯ ನಿರ್ದೇಶಕಿ ಡಾ. ಬಿ.ಎಲ್. ಸುಜಾತ ರಾಥೋಡ್, ‘ಸ್ವಯಂಪ್ರೇರಿತ ರಕ್ತದಾನ ಸಮಾಜವನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

ADVERTISEMENT

ಈ ಬಾರಿಯ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ‘ಸರ್ವರಿಗೂ ಸುರಕ್ಷಿತ ರಕ್ತ’ ಘೋಷಣೆಯೊಂದಿಗೆ ಆಚರಿಸಲಾಯಿತು. 25ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ 16 ಮಂದಿಯನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.