ADVERTISEMENT

ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್‌ನಲ್ಲಿ ಸಂಸ್ಕರಿಸಿದ ನೀರು: ರಾಮ್‌ಪ್ರಸಾತ್‌

ದೇಶದಲ್ಲೇ ಮೊದಲ ಬಾರಿಗೆ ಯೋಜನೆ: 16ರಂದು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 15:52 IST
Last Updated 6 ಏಪ್ರಿಲ್ 2024, 15:52 IST
ಜಲಮಂಡಳಿ
ಜಲಮಂಡಳಿ   

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡಲು ಚಿಂತನೆ ನಡೆಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.

ಕೈಗಾರಿಕೋದ್ಯಮಿಗಳು, ಪೀಣ್ಯ ಕೈಗಾರಿಕಾ ಸಂಸ್ಥೆ, ಎಫ್‌ಕೆಸಿಸಿಐ, ಕಾಸಿಯಾ ಪದಾಧಿಕಾರಿಗಳು, ಎಂಎಸ್‌ಎಂಇ ನಿರ್ದೇಶಕ ಡಾ. ವಿಜಯ ಮಹಾಂತೇಶ್‌, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ನಿರ್ದೇಶಕ ಕುಮಾರ್‌ ಅವರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.

‘ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ನಮ್ಮ ಗುರಿಯಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪ್ರಮಾಣೀಕೃತವಾದ ಸಂಸ್ಕರಿಸಿದ ನೀರನ್ನು ಕುಡಿಯಲು ಹೊರತುಪಡಿಸಿ ಸ್ವಚ್ಛತೆ ಸೇರಿದಂತೆ ಬಹಳಷ್ಟು ಕಾರ್ಯಗಳಿಗೆ ಉಪಯೋಗಿಸಬಹುದಾಗಿದೆ’ ಎಂದರು.

ADVERTISEMENT

ಕೈಗಾರಿಕೆಗಳಿಗೆ ಸಮರ್ಪಕ ರೀತಿಯಲ್ಲಿ ನೀರು ಪೂರೈಸಲಾಗುತ್ತಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಆರಿಫ್‌ ಎಚ್‌.ಎಂ. ತಿಳಿಸಿದರು.

ನೀರಿನ ಉಳಿತಾಯ ಮಾಡುವಂತಹ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನಾಂದೋಲನದಲ್ಲಿ ಭಾಗಿಯಾಗುವುದಾಗಿ ಕೈಗಾರಿಕೋದ್ಯಮಿಗಳು ತಿಳಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.