ADVERTISEMENT

ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾದೇಶಿಕ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 2:16 IST
Last Updated 28 ಏಪ್ರಿಲ್ 2025, 2:16 IST
   

ಕೆ.ಆರ್.ಪುರ: ಪ್ರತಿಯೊಬ್ಬ ವಿದ್ಯಾರ್ಥಿಯು ಚಿಕ್ಕಂದಿನಿಂದಲೇ ಕ್ರೀಡೆಯ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು ಎಂದು ಕೇಂದ್ರೀಯ ವಿದ್ಯಾಲಯಗಳ ಪ್ರಾದೇಶಿಕ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಹೇಳಿದರು.

ಕೆ.ಆರ್.ಪುರ ಸಮೀಪದ ಸಿ.ವಿ.ರಾಮನ್ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೆ.ವಿ.ಡಿ.ಆರ್.ಡಿ.ಒ ಶಾಲೆಗಳ ಪ್ರಾದೇಶಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ಮಾನಸಿಕ ನೆಮ್ಮದಿ ಜೊತೆಗೆ ಆರೋಗ್ಯವು ವೃದ್ದಿ ಆಗುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರು ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಹುದ್ದೆಗಳನ್ನು ಪಡೆಯಬಹುದು ಎಂದರು.

ADVERTISEMENT

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ನಾರಾಯಣರಾವ್, ‘ವಿದ್ಯಾರ್ಥಿಗಳಿಗಾಗಿ ಸ್ಕೇಟಿಂಗ್‌, ಬ್ಯಾಡ್ಮಿಂಟನ್ ಆಡಿಸಲಾಗಿತ್ತು. 200ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಭವಿಷ್ಯದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಆಯೋಜಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.